ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಉಚಿತ ಯೋಜನೆಗಳದ್ದೇ ಚರ್ಚೆ ಜೋರಾಗಿದೆ. ಈ ಯೋಜನೆಗಳನ್ನು ಸರ್ಕಾರ ಒಂದೊಂದಾಗಿ ಚಾಲನೆ ನೀಡಲು ನಿರ್ಧರಿಸಿದೆ.
ಮೊದಲನೆಯದಾಗಿ ಇಂದು “ಶಕ್ತಿ ಯೋಜನೆ” ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಮತ್ತೊಂದಡೆ ವಿದ್ಯುತ್ ಬಿಲ್ ದರ ಏರಿಕೆ ರಾಜ್ಯದ ಜನರನ್ನು ಕಂಗೆಡಿಸಿದೆ. ಇನ್ನು ಮುಂಗಾರು ಕೇರಳ ಪ್ರವೇಶ ಮತ್ತು ಬಿಪರ್‌ಜಾಯ್ ಚಂಡಮಾರುತ ತೀರ್ವತೆ ಜೋರಾಗಿದ್ದು ದಕ್ಷಿಣ ಭಾರತದಲ್ಲಿ ಅಧಿಕ ಮಳೆಯಾಗಲಿದೆ. ರಾಜ್ಯದ ಕರವಾಳಿ ಅತಿಯಾಗಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.