ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಜ್ಯ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಬೆಳಗ್ಗೆ 11ಕ್ಕೆ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. 8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಇಂದಿರಾ ಕ್ಯಾಂಟೀನ್ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳು ಫುಲ್ ಆಗಿದ್ದು ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಮತ್ತೊಂದೆಡೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಕುಡಿಯುವ ನೀರು, ಜಲಜೀವನ್ ಮಿಷನ್, ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.