ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರನೂ ಆಗಿರುವ ಮಾಜಿ ಶಾಸಕ ಡಾ. ಯತಿಂದ್ರ ಅವರಿಗೆ ಉನ್ನತ ಸ್ಥಾನ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆಂಬಲಿಗರು ಯತಿಂದ್ರ ಹೆಸರಲ್ಲಿ ನಂಜನಗೂಡು ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ.
ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರಿಂದ ಪೂಜೆ ಸಲ್ಲಿಸಲಾಗಿದೆ. ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಡಾ. ಯತಿಂದ್ರ ಹಗಲಿರುಳು ಶ್ರಮಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಯತಿಂದ್ರಗೆ ಉನ್ನತ ಸ್ಥಾನಮಾನ ನೀಡಬೇಕು. ಈ ಮೂಲಕ ಕ್ಷೇತ್ರಕ್ಕೆ ಹಾಗೂ ಜಿಲ್ಲೆಗೆ ಮತ್ತಷ್ಟು ಸೇವೆ ಅವರಿಂದ ದೊರೆಯಲಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.