ಕೂಗು ನಿಮ್ಮದು ಧ್ವನಿ ನಮ್ಮದು

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿ

ಬೆಂಗಳೂರು: ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಯಾರ ಆಗ್ತಾರೆ ಎಂಬ ಕುತೂಹಲ ಎಲ್ಲಡೆ ಮನೆ ಮಾಡಿತು. ಈಗ ಅಧಿಕೃತವಾಗಿ ಬಿಜೆಪಿ ಹೈಕಮಾಂಡ್ ಕೊನೆಗೂ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಘೋಷಣೆ ಮಾಡಿದೆ.

ಬೊಮ್ಮಾಯಿ ಹೆಸರು ಘೋಷಣೆ ಆಗುತ್ತಿದಂತೆ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕಾರ ಮಾಡಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೊಮ್ಮಾಯಿ ಹೆಸರು ಪ್ರಸ್ತಾಪಿಸಿದ್ದಾರೆ. ಯಡಿಯೂರಪ್ಪ ಪ್ರಸ್ತಾಪವನ್ನು, ಬೊಮ್ಮಾಯಿ ಹೆಸರನ್ನು ಗೋವಿಂದ ಕಾರಜೋಳ ಅನುಮೋದಿಸಿದ್ದಾರೆ.

ಇಂದು ಖಾಸಗಿ ಹೊಟೇಲ್ನಲ್ಲಿ ನಡೆದ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ನಡೆದಿದೆ. ಇಂದೇ ಮುಖ್ಯಮಂತ್ರಿ ಹೆಸರು ಘೋಷಣೆಯನ್ನೂ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಸಂಸದೀಯ ಮಂಡಳಿಯಿಂದ ವೀಕ್ಷಕರ ನೇಮಕ ಮಾಡಲಾಗಿತ್ತು. ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಗೆ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮಿಸಿದ್ದರು. ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಸಿಟಿ ರವಿ ಸೇರಿದಂತೆ ರಾಜ್ಯದ ಬಿಜೆಪಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

error: Content is protected !!