ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕ ಕಂತೆ ಕಂತೆ ಹಣ ಎಲೆಕ್ಷನ್ ಹತ್ತಿವಾಗಿರುವ ಸಮಯದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಬಿಕ್ಕಟ್ಟಿನ ಸ್ಥಿತಿ ಎದುರಾಗುವಂತೆ ಮಾಡಿದೆ. ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಬೆಂಗಳೂರಿನ ರೇಸ್ ಕೋರ್ಸ್ ರೋಡಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಸೂಟ್ ಕೇಸ್ ಮತ್ತು ಸೂಟ್ ಕೇಸ್ ನ ಪ್ಲಕಾರ್ಡ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಸಿದ್ದರಾಮಯ್ಯ ರಾಜ್ಯ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಸಲೀಂ ಅಹ್ಮದ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿತು.