ಕೂಗು ನಿಮ್ಮದು ಧ್ವನಿ ನಮ್ಮದು

ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ. ಡಿಕೆಶಿ ಇದರ ಪ್ರೊಡ್ಯುಸರ್, ಡೈರೆಕ್ಟರ್: ಸಿ.ಟಿ.ರವಿ

ಚಿಕ್ಕಮಗಳೂರು: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ. ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ಡಿಕೆ ಶಿವಕುಮಾರ್ ಅವರೇ ಈ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಕಾಂಗ್ರೆಸ್, ಡಿಕೆ ಶಿವಕುಮಾರ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು. ಡಿ.ಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ಕಟ್ಟಾ ಬೆಂಬಲಿಗರಿಂದಲೇ ಈ ಕೃತ್ಯ ನಡೆದಿದೆ.

ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಪ್ರತಿಮೆಗೆ ಅಪಮಾನ ಕೂಡ ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರು ಮಾಡಿದ್ದಾರೆ. ಜಾತಿ ಸಂಘರ್ಷ, ಭಾಷಾ ಸಂಘರ್ಷವನ್ನು ಹುಟ್ಟು ಹಾಕುವುದೇ ಇವರ ಉದ್ದೇಶವಾಗಿದೆ. ಹಾಗಾಗಿಯೇ ಎಂಇಎಸ್ ಸಂಘಟನೆಯನ್ನು ಕೆಪಿಸಿಸಿ ಅಧ್ಯಕ್ಷರು ಸಮರ್ಥನೆ ಮಾಡಿದ್ದಾರೆ.

ಈ ಷಡ್ಯಂತ್ರವನ್ನು ಬಯಲಿಗೆಳೆಯಬೇಕೆಂದು
ಸಿಎಂ, ಗೃಹ ಸಚಿವರನ್ನ ಆಗ್ರಹ ಮಾಡ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ.

error: Content is protected !!