ಕೂಗು ನಿಮ್ಮದು ಧ್ವನಿ ನಮ್ಮದು

ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಯುವಕನನ್ನು ಹತ್ಯೆ ಮಾಡಲಾಗಿದೆ.
ಜಮೀರ್(23) ಕೊಲೆಯಾದ ಯುವಕ. ಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಜಮೀರ್‍ನನ್ನು ಕಳದೆ ರಾತ್ರಿ ಬರ್ಬರಾಗಿ ಹತ್ಯೆ ಮಾಡಲಾಗಿದೆ. ಐದಾರು ಜನ ದುಷ್ಕರ್ಮಿಗಳು ಸೇರಿ ಬರ್ಬರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಾರಾಕಾಸ್ತ್ರಗಳಿಂದ ಯುವಕನನ್ನು ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಜಮೀರ್ ಭೀಕರ ಕೊಲೆಯಿಂದಾಗಿ ಕಲಬುರಗಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಸದ್ಯ ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

error: Content is protected !!