ಕೂಗು ನಿಮ್ಮದು ಧ್ವನಿ ನಮ್ಮದು

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಟಣಮನಕಲ್ ಬಳಿ ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಮೃತ ದುರ್ದೈವಿಗಳನ್ನು ಸಂತೋಷ್ ಮತ್ತು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಸದ್ಯ ಸಂತೋಷ್ ಶವ ನದಿಯಲ್ಲಿ ಪತ್ತೆಯಾಗಿದ್ದು, ಅನೀಲ್ ಕುಮಾರ್ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಹಟ್ಟಿ ಪಟ್ಟಣದ 5 ಜನ ಯುವಕರು ಕೃಷ್ಣಾ ನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನದಿಯಲ್ಲಿ ಇಬ್ಬರು ನೀರುಪಾಲಾಗಿದ್ದು, ಇದೀಗ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

error: Content is protected !!