ಕೂಗು ನಿಮ್ಮದು ಧ್ವನಿ ನಮ್ಮದು

ಆಟವಾಡುವಾಗ ಆಯತಪ್ಪಿ ರಾಜಕಾಲುವೆಗೆ ಬಿದ್ದ ಮಗು; ಶೋಧಕಾರ್ಯ ಮಾಡಿದ್ರು ಪತ್ತೆಯಾಗದ ಕಂದ

ಬೆಂಗಳೂರು: ಆಟವಾಡುವಾಗ ಆಯತಪ್ಪಿ ಮೂರು ವರ್ಷದ ಗಂಡು ಮಗು ರಾಜಕಾಲುವೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಬಾಲಕ ರಾಜಕಾಲುವೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಾಲಕನಿಗಾಗಿ ಅಗ್ನಿಶಾಮಕದಳ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ ಇನ್ನೂ ಪತ್ತೆಯಾಗಿಲ್ಲ.

ಮೂರು ವರ್ಷದ ಕಬೀರ್ ಸೌದ್ ನಾಪತ್ತೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆಯ ಅಪಾರ್ಟ್ಮೆಂಟ್ವೊಂದರ ಬಳಿ ರಾಜಕಾಲುವೆಗೆ ಮೂರು ವರ್ಷದ ಕಬೀರ್ ಸೌದ್ ಬಿದ್ದು ನಾಪತ್ತೆಯಾಗಿದ್ದಾನೆ. ನೇಪಾಳ ಮೂಲದ ಬಿನೋದ್ ಸೌದ್ ಹಾಗೂ ಸ್ವಪ್ನ ದಂಪತಿಯ ಪುತ್ರನಾಗಿರುವ ಕಬೀರ್, ನಿನ್ನೆ ಮಕ್ಕಳೊಂದಿಗೆ ಆಟವಾಡುವಾಗ ಆಯತಪ್ಪಿ ರಾಜಕಾಲುವೆಗೆ ಬಿದ್ದಿದ್ದಾನೆ.

ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಕೆಲ ಹೊತ್ತಿನ ಬಳಿಕ ನಾಪತ್ತೆಯಾಗಿದ್ದ ಮಗುವಿಗಾಗಿ ಶೋಧ ನಡೆಸಿದ್ದಾರೆ. ಕಬೀರ್ ಜೊತೆ ಆಟವಾಡುತ್ತಿದ್ದ ಮಕ್ಕಳಿಗೆ‌ ಕೇಳಿದಾಗ ರಾಜಕಾಲುವೆಯತ್ತ ಬೊಟ್ಟು ಮಾಡಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು‌ ವರ್ತೂರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ನಿನ್ನೆ ಸಂಜೆ ಅಗ್ನಿಶಾಮಕತಂಡ ಕಾರ್ಯಾಚರಣೆ ನಡೆಸಿದ್ದರು.

ನಗರದ ಸುಜಾತ ಥಿಯೇಟರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಹೋಂಡಾ ಆಕ್ಟೀವಾದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಉಮಾ ಎಂಬ ಮಹಿಳೆ ಕೆಳಗೆ ಬಿದ್ದಿದ್ದು ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದಿದೆ.ಘಟನೆಯಲ್ಲಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಇವರ ಜೊತೆ ಇದ್ದ ಮಗಳು ವನಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇಬ್ಬರು ಮಹಿಳೆಯರು ಗಾಡಿಯಲ್ಲಿ ಬರುತ್ತಿದ್ರು. ಮುಂದೆ ಗುಂಡಿ ಇರೋ ಕಾರಣ ಆ ಮಹಿಳೆ ಸಡನ್ ಬ್ರೇಕ್ ಹಾಕಿ‌ ನಿಲ್ಲಿಸಿದ್ರು. ಸಡನ್ ಆಗಿ ಗಾಡಿ ನಿಲ್ಲಿಸಿರೋ ಕಾರಣ ಗಾಡಿ ಬಿತ್ತು. ಹಿಂದೆ ಇದ್ದ ಮಹಿಳೆ ಕೆಳಗೆ ಬಿದ್ರು ಈ ಸಂದರ್ಭದಲ್ಲಿ ಮಹಿಳೆಯ ಕಾಲ ಮೇಲೆ ಬಸ್ ಹತ್ತಿದೆ. ಈ ಘಟನೆಗೆ ರಸ್ತೆಗುಂಡಿನೇ‌ ಕಾರಣ. ರಸ್ತೆಗುಂಡಿ‌ ಇರಲಿಲ್ಲ ಅಂದರೆ ಆ ಮಹಿಳೆಗೆ ಏನೂ ಆಗುತ್ತಿರಲಿಲ್ಲ ಎಂದು ಪ್ರತ್ಯಕ್ಷದರ್ಶಿ ಜಮ್ಮೀರ್ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ರಸ್ತೆ ಗುಂಡಿ ಮುಚ್ಚದ ಅಧಿಕಾರಿಗಳಿಗೆ ಕ್ಲಾಸ್

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಪೂರ್ವ ವಲಯದಲ್ಲಿ ಕಾಲ್ನಡಿಗೆ ಮೂಲಕ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಹೆಣ್ಣೂರು ಮುಖ್ಯ ರಸ್ತೆ, ಬಾಣಸವಾಡಿ ಕಡೆಗಳಲ್ಲಿ ಓಡಾಡು ಜನರನ್ನು ಮಾತನಾಡಿಸುತ್ತಿದ್ದಾರೆ. ಇದಕ್ಕೆ ಪಾಲಿಕೆ ವಲಯ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಪರಿಶೀಲನೆ ವೇಳೆ ರಸ್ತೆ ಗುಂಡಿಗಳನ್ನ ಮುಚ್ಚದ ಅಧಿಕಾರಿಗಳ ವಿರುದ್ಧ ತುಷಾರ್ ಗಿರಿನಾಥ್ ಗರಂ ಆಗಿದ್ದಾರೆ.

ಈ ವೇಳೆ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಈ ಘಟನೆ ನೋವು ತಂದಿದೆ. ಒಂದು ಅಮೂಲ್ಯ ಜೀವ ಹೋಗಿದೆ. ಈಗ ತನಿಖೆ ನಡೆಯುತ್ತಿದೆ, ಯಾರ‌ ತಪ್ಪು ಅಂತಾ ಗೊತ್ತಾಗುತ್ತೆ. ಅಧಿಕಾರಿಗಳ ತಪ್ಪಾ, ಗುತ್ತಿಗೆದಾರರ ತಪ್ಪು ಅನ್ನೋದು ಗೊತ್ತಾಗುತ್ತೆ. ಸದ್ಯ ಮಳೆ ಬರುತ್ತಿರುವ ಕಾರಣ ರಸ್ತೆ ಗುಂಡಿ ಮುಚ್ಚಲು ಆಗ್ತಿಲ್ಲ. ಅದಕ್ಕೆ ಜಲ್ಲಿಗಳನ್ನ ಹಾಕಿ ಮುಚ್ಚಲಾಗ್ತಿದೆ. ಅವರು ಹೇಗೆ ಬಿದಿದ್ದಾರೆ ಅಂತಾ ಗೊತ್ತಿಲ್ಲ, ಅದರ ಬಗ್ಗೆ ತನಿಖೆ ನಡೆಯುತ್ತದೆ ಎಂದರು.

error: Content is protected !!