ಕೂಗು ನಿಮ್ಮದು ಧ್ವನಿ ನಮ್ಮದು

ಮೈಸೂರು: ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ದ್ವಿತೀಯ PUC ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಮಿತಾ(16) ಅನುಮಾನಾಸ್ಪದ ರೀತಿಯಲ್ಲಿ ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ.

ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ನಮಿತಾ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!