ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ನಮ್ಮ ಮೊದಲ ಆದ್ಯತೆ ಎಂದುವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತೇವೆ. ಖಾಲಿಯಿರುವ ಎಲ್ಲಾ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ, ಮೇಕೆದಾಟು ಯೋಜನೆಗೆ ಸಿಎಂ ಅನುದಾನ ಮೀಸಲಿಟ್ಟಿದ್ದರು.
ಮಹದಾಯಿ ಯೋಜನೆ ಮುಂದುವರಿಸಲು ಕ್ರಮಕೈಗೊಳ್ಳುತ್ತೇವೆ. ಹಿಂದಿನ ಸರ್ಕಾರ ಏನು ಮಾಡಿತ್ತು ಎಂದು ಚರ್ಚೆ ಮಾಡುವುದಿಲ್ಲ. ರಾಜ್ಯದ ಜನತೆ ನಮ್ಮ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದರು.