ಕೂಗು ನಿಮ್ಮದು ಧ್ವನಿ ನಮ್ಮದು

ಶೆಟ್ಟರ್, ಲಕ್ಷ್ಮಣ್ ಸವದಿಗೆ ಸೂಕ್ತ ಸ್ಥಾನಮಾನ; ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು ಬೆಳಗಾವಿಯಲ್ಲಿ ಹೇಳಿದ್ದಾರೆ.

ಯಾರು ನಮ್ಮ ಜೊತೆ ಧೈರ್ಯ ಮಾಡಿ ಕೈ ಜೋಡಿಸಿದ್ದಾರೆ ಯಾರನ್ನೂ ಕೈ ಬಿಡುವ ಪ್ರಶ್ನೆ ಬರಲ್ಲ, ಲೋಕಸಭೆ ಚುನಾವಣೆ ಟಾರ್ಗೆಟ್ ಮಾಡಿ ಇಬ್ಬರೂ ನಾಯಕರ ಬಳಕೆ ಮಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಪಕ್ಷದ ನಾಯಕರು, ಅವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಗೆದ್ದಿರಬಹುದು, ಸೋತಿರಬಹುದು ಅವರು ನಮ್ಮ ನಾಯಕರು ಎಂದಿದ್ದಾರೆ.

error: Content is protected !!