ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ? ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತ ಹೆಸರು ಇಟ್ಟು ಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ.
ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ? ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು. ಆಂಜನೇಯ ದೇಗುಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದರು.