ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿಜಯನಗರದ ಮರಾಠಿ ಶಾಲೆಯೊಂದರಲ್ಲಿ ತಮ್ಮ ಮತ ಚಲಾಯಿಸಿದರು. ಲಕ್ಷ್ಮ ಹೆಬ್ಬಾಳ್ಕರ್ ಮತಗಟ್ಟೆಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿದರು.
ಮತ ಚಲಾಯಿಸಲು ಬಂದಾಗ ಕೈಯಲ್ಲಿ ಅವರ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನ ಫೋಟೋ ಇತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಸಹೋದರ ಮತ್ತು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನು ಸಹ ನೋಡಬಹುದು.