ಬೆಳಗಾವಿ : ಅಕ್ರಮ ಸಾರಾಯಿ ಮಾರಾಟ ದಂಧೆ ತಡೆಗಟ್ಟುವ ಸಲುವಾಗಿ ಸರ್ಕಾರ ಅಬಕಾರಿ ಇಲಾಖೆ ಸಿಬ್ಬಂದಿಗಳ ನೇಮಕ ಮಾಡಿದೆ. ಆದ್ರೆ ರಾಯಭಾಗ ತಾಲೂಕಿನ ಅಬಕಾರಿ ಇಲಾಖೆಯಲ್ಲಿ ಎಲ್ಲಾ ಸಿಬ್ಬಂದಿಗಳು ನಾಪತ್ತೆಯಾಗಿದ್ದರೆ. ಇನ್ನೊಂದು ಕಡೆಗೆ ಒಬ್ಬ ಸಿಬ್ಬಂದಿ ಅಕ್ರಮ ಮದ್ಯ ಮಾರಾಟ ಮಾಡುವಾಗ ದಾಳಿ ಮಾಡಿ ವಶಪಡಿಸಿಕೊಂಡ ಮದ್ಯವನ್ನೆ ಕಂಠ ಪೂರ್ತಿ ಕುಡಿದು ಕಚೇರಿಯಲ್ಲಿ ತೇಲಾಡುತ್ತಿದ್ದನು.
ಪ್ರತಿ ಹಳ್ಳಿಗಳಲ್ಲಿ ಹೋಟೆಲ್, ಢಾಬಾಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಶಾಲಾ ವಿದ್ಯಾರ್ಥಿಗಳು ಚಿಕ್ಕ ಚಿಕ್ಕ ಮಕ್ಕಳು ದಾರಿ ತಪ್ಪುತ್ತಿದ್ಧಾರೆ. ಇಷ್ಟೆಲ್ಲಾ ಆದರೂ ಅಬಕಾರಿ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ಧಾರೆ. ಈ ಬಗ್ಗೆ ಅಬಕಾರಿ ಇಲಾಖೆ ಬೆಳಗಾವಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು ಕೂಡ ಯಾವುದೇ ಕ್ರಮ ಕೈಗೊಳ್ಳದೆ ಬೇಲಿಯೇ ಎದ್ದು ಹೊಲ ಮೇಯದಂತೆ ಆಗಿದೆ. ಇಂತಹ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.