ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ರಾಜನಕುಂಟೆ ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಇಂದು(ಗುರುವಾರ) ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಲಿದ್ದಾರೆ.
ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಲು ರೈತರು ತಯಾರಿ ನಡೆಸಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ರೈತರು ರಾಜ್ಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆಯಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ತಡೆಯುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ರೆಡಿಯಾಗಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಕಬ್ಬಿನ ದರ ನಿಗದಿ ಪಡಿಸಿ ಅಂತ ಕೇಳಲಾಗುತ್ತಿದೆ ಆದ್ರೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡಿಲ್ಲ. ಈ ಕೂಡಲೇ ಸರ್ಕಾರ ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ರಾಜ್ಯ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕುತ್ತೇವೆ ಅಂತ ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘದ ಎಚ್ಚರಿಕೆ ನೀಡಿದೆ.