ಕೂಗು ನಿಮ್ಮದು ಧ್ವನಿ ನಮ್ಮದು

ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: “ಶಕ್ತಿ ಯೋಜನೆ” ಅನುಮೋದನೆ ಆದೇಶದಲ್ಲಿ ಏನೇನಿದೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬದ್ಧವಾಗಿದ್ದು, ಯೋಜನೆಗಳಿಗೆ ಅನುಮೋದನೆಯನ್ನೂ ನೀಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಒದಗಿಸುವ “ಶಕ್ತಿ ಯೋಜನೆ”ಗೂ ಕೂಡ ಅನುಮೋದನೆ ದೊರೆತಿದ್ದು, ರಾಜ್ಯ ಸಾರಿಗೆ ನಿಗಮಗಳು ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೂಡ ಕೈಗೊಳ್ಳುತ್ತಿದೆ.

ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.

ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ “ಶಕ್ತಿ ಯೋಜನೆ”ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಇದರಲ್ಲಿ ಪ್ರಸ್ತುತ, ರಾಜ್ಯ ಸರ್ಕಾರದ “ಶಕ್ತಿ ಯೋಜನೆ”ಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎಸಿ ಬಸ್ ಮತ್ತು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ

error: Content is protected !!