ಕೂಗು ನಿಮ್ಮದು ಧ್ವನಿ ನಮ್ಮದು

ಶಾಸಕರ ಪ್ರಮಾಣವಚನ ಸ್ವೀಕರಿಸಿದ ಶಾಸಕರು

ಬೆಂಗಳೂರು: ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೇವನಹಳ್ಳಿ ಶಾಸಕರಾಗಿ K.H.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಯಮಕನಮರಡಿ ಶಾಸಕರಾಗಿ ಸತೀಶ್ ಜಾರಕಿಹೊಳಿ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಚಿತ್ತಾಪುರ ಶಾಸಕರಾಗಿ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್ ಶಾಸಕರಾಗಿ ರಾಮಲಿಂಗಾರೆಡ್ಡಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

error: Content is protected !!