ಬೆಳಗಾವಿ:ಜಿಲ್ಲೆಯ ಗೋಕಾಕ ಪಟ್ಟಣದ ಬಸವ ನಗರದ ರಾಠೋಡ ಎಂಬುವವರಿಗೆ ಸೇರಿದ ಎರಡು ಅಂತಸ್ತಿನ ಮನೆಯಲ್ಲಿ ಗೀಜರ್ ಬ್ಲಾಸ್ಟ್ ಆಗಿದೆ. ಈ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸಲು ಯಶಸ್ವಿಯಾಗಿದ್ದಾರೆ. ಅದೃಷ್ಟ ವಶಾತ ಯಾವುದ ಪ್ರಾಣಹಾನಿ ಸಂಬವಿಸಿಲ್ಲ. ಬೆಂಕಿಯ ಕೆನ್ನಾಲಿಗೆಗಳು ಕಟ್ಟಡದಿಂದ ಹೊರಗೆ ಕಾಣಿಸಿದ್ದು, ಜನರು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಈ ದುರಂತದಲ್ಲಿ ಆಸ್ತಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.