ಹಾಸನ: ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಬಿಳಿಕ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡುತ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ ಎಂದು ಸಚಿವ ಗೋಪಾಲಯ್ಯ, JDS ಹಾಗೂ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಹಾಸನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ನಂತರ ಮಾತನಾಡಿದ ಗೋಪಾಲಯ್ಯ, ಖರ್ಗೆ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ. ಇಲ್ಲದಿದ್ದರೆ ಜನರು ಅವರನ್ನು ಆಯ್ಕೆ ಮಾಡುವುದಿಲ್ಲ ಇದನ್ನು ಜನರು ಈಗಾಗಲೇ ತೋರಿಸಿಕೊಟ್ಟಿದ್ದಾರೆ ಎಂದ್ರು.
ಈ ವೇಳೆ RSS ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, RSS ಇರುವ ಕಾರಣ ಇಂದು ನಮ್ಮ ದೇಶ ಉಳಿದಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತಮ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿದ್ದೇವೆ. ರಾಜ್ಯದಾದ್ಯಂತ ಲಸಿಕೆ ಕಾರ್ಯ ನಡೆಯುತ್ತಿದೆ. ಈಗ ನಮ್ಮ ದೇಶದಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ ಎಂದು ಗೋಪಾಲಯ್ಯ ಮಾಹಿತಿಯನ್ನು ಹಂಚಿಕೊಂಡ್ರು. ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕನ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಗೋಪಾಲಯ್ಯ, ಐಟಿ ದಾಳಿ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ಕೊಡುತ್ತೇನೆ ಎಂದ್ರು.