ಕೂಗು ನಿಮ್ಮದು ಧ್ವನಿ ನಮ್ಮದು

ಕೋಲಾರ: ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರು

ಕೋಲಾರ: ಕೋಲಾರದ ಗಾಂಧಿ ನಗರದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದಿದ್ದು, ಅದೃಷ್ಟವಶಾತ್ ಶಾಲೆಯಲ್ಲಿದ್ದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಂಧಿನಗರದ ಸರ್ಕಾರಿ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಮಕ್ಕಳು ಮತ್ತು ಶಿಕ್ಷಕರು ನಿತ್ಯ ಜೀವಭಯದಲ್ಲೇ ಶಾಲೆಗೆ ಬರುತ್ತಿದ್ದಾರೆ. ಇಂದು (ಜ.17) ಶಾಲೆಯಲ್ಲಿ ಮಕ್ಕಳಿದ್ದಾಗ ಮೇಲ್ಚಾವಣಿಯ ಸಿಮೆಂಟ್ ಪ್ಲಾಸ್ಟಿಂಗ್ ಕುಸಿದಿದೆ.

ಶಾಲೆ ದುರಸ್ತಿ ಮಾಡಿಸುವಂತೆ ಹಲವು ಬಾರಿ ಪೋಷಕರು ಮನವಿ ಮಾಡಿದ್ದರು. ಅಧಿಕಾರಿಗಳು ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!