ಗೃಹಜ್ಯೋತಿ ಯೋಜನೆಗೆ ನಿನ್ನೆ 1,89,945 ಗ್ರಾಹಕರಿಂದ ನೋಂದಣಿ, ಗೃಹಜ್ಯೋತಿ ಯೋಜನೆಗೆ ನಿನ್ನೆ(ಜೂನ್ 21) 1,89,945 ಗ್ರಾಹಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಕಳೆದ 4 ದಿನಗಳಲ್ಲಿ ಒಟ್ಟು 10,85,320 ಗ್ರಾಹಕರಿಂದ ಅರ್ಜಿ ಸಲ್ಲಿಕೆಯಾಗಿದೆ. ಇಂದಿನಿಂದ ಸರಾಗವಾಗಿ ಜನರು ಅರ್ಜಿ ಸಲ್ಲಿಸಲು ಪ್ರತ್ಯೇಕ ಲಾಗಿನ್ ಐಡಿಯನ್ನು ವಿದ್ಯುತ್ ಕಚೇರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಪ್ರತ್ಯೇಕ ಲಿಂಕ್ ಮೂಲಕ ಬೆಸ್ಕಾಂ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು