ಕೂಗು ನಿಮ್ಮದು ಧ್ವನಿ ನಮ್ಮದು

ಸಾರಿಗೆ ನೌಕರರ ವೇತನ ವಿಳಂಬ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ: ಹೆಚ್‍.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೆಚ್ಡಿಕೆ, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯಿಸಿದ್ರು.

ಕೋವಿಡ್ ಮಹಾಮಾರಿಯಿಂದ ತತ್ತರಿಸಿರುವ KSRTC ಹಾಗೂ BMTC ನೌಕರರ ಮೇಲೆ ಸರ್ಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಆಗಸ್ಟ್ ತಿಂಗಳಲ್ಲಿ ಅರ್ಧ ಸಂಬಳ ಆಗಿದ್ದು, ಜೊತೆಗೆ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ. ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರ್ಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು.

ಹಾಗಾಗಿ ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಕೋರೊನಾವನ್ನು ಲೆಕ್ಕಿಸದೆ ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು ಸಿಎಂ ಮತ್ತು ಸಾರಿಗೆ ಸಚಿವರು ಕೂಡಲೇ ಕ್ರಮ ಕೈಗೊಳ್ಳಬೇಕು. ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

error: Content is protected !!