ಕೂಗು ನಿಮ್ಮದು ಧ್ವನಿ ನಮ್ಮದು

ಬಿ.ಎಸ್‍.ಯಡಿಯೂರಪ್ಪ ಆಪ್ತನ ಮೇಲೆ ಐಟಿ ರೇಡ್ BJPಯ ಆಂತರಿಕ ಕಿತ್ತಾಟ ಇದಕ್ಕೆ ಕಾರಣ: ಎಚ್‍.ಡಿ.ಕುಮಾರಸ್ವಾಮಿ

ಕಲಬುರಗಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ BJPಯ ಆಂತರಿಕ ಕಿತ್ತಾಟದಿಂದ ಬೆಳಕಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ವೈ ಮತ್ತು ಡಿ.ಕೆ.ಶಿವಕುಮಾರ್ ಆಪ್ತರ ಮೇಲೆ ಐಟಿ ದಾಳಿ ಸಂಬಂಧಿಸಿದಂತೆ ಕಲಬುರಗಿ ಏರ್‌ಪೋರ್ಟ್‌ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಐಟಿ ದಾಳಿ ಬಗ್ಗೆ ನನಗೆ ಯಾವುದೇ ರೀತಿಯ ಪ್ರತಿಕ್ರಿಯೆ ಇಲ್ಲ.

ಆದ್ರೆ ಉಪಚುನಾಣೆ ಸಂದರ್ಭದಲ್ಲಿ ಐಟಿ ದಾಳಿ ಸರ್ವೇ ಸಾಮಾನ್ಯ. ಆದ್ರೆ ಬಿಎಸ್ವೈ ಆಪ್ತರ ಮೇಲೆ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ. ಇದರಿಂದ ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ದೂರಿದ್ರು. ಉಪಚುನಾಣೆಯಲ್ಲಿ JDS ಅಭ್ಯರ್ಥಿಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರು ಇವರು ನನಗೆ ಹೇಳೋಕೆ? ಅವರ ಯಾವ ದೊಣ್ಣೆ ನಾಯಕ? ಅವರ ಪರ್ಮಿಷನ್ ತಗೋಂಡು ಅಭ್ಯರ್ಥಿ ಹಾಕಬೇಕಾ? ಎಲ್ಲಿ ಯಾವ ಅಭ್ಯರ್ಥಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ. ಅವರಿಗೆ ಪರಿಜ್ಞಾನ ಇದ್ರೆ ನನ್ನ ಪಕ್ಷದ ಅಭ್ಯರ್ಥಿ ಬಗ್ಗೆ ಮಾತನಾಡಬಾರದು ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

RSS ಕುರಿತು ಎಚ್‍.ಡಿ ದೇವೆಗೌಡರ ಹೇಳಿಕೆ ವಿಚಾರವಾಗಿ, ಸ್ವಾತಂತ್ರ ಪೂರ್ವದ RSS ಬೇರೆ, ಈಗಿನ RSS ಬೇರೆ. ಈಗಿನ RSS ದೇಶವನ್ನು ಹಾಳು ಮಾಡುವ ಸಂಘಟನೆ. ದೇವೆಗೌಡರು ಹೇಳಿದ್ದು RSS ಸ್ವಾತಂತ್ರ ಪೂರ್ವದ ಸಂಘಟನೆ ಬಗ್ಗೆ ಎಂದು ಕುಮಾರಸ್ವಾಮಿ ಹೇಳಿದರು.

error: Content is protected !!