ಕೂಗು ನಿಮ್ಮದು ಧ್ವನಿ ನಮ್ಮದು

ಜಿಲ್ಲೆಗಳಲ್ಲಿ ಬಿಜೆಪಿಯಿಂದ ಫಲಾನುಭವಿಗಳ ಸಮಾವೇಶ ಹಾಲಪ್ಪ ಆಚಾರ್

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆಗಳನ್ನು ಜನರಿಗೆ ಸಮಗ್ರವಾಗಿ ತಲುಪಿಸಬೇಕು. ಅದಕ್ಕಾಗಿ 31 ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಮಾಡಲು ನಿರ್ಣಯ ಮಾಡಿದ್ದೇವೆ ಎಂದು ಹಾಲಪ್ಪ ಆಚಾರ್ ಹೇಳಿದರು. ಚಿತ್ರದುರ್ಗದಲ್ಲಿ ಮಾರ್ಚ್ 4 ರಂದು ಸಿಎಂ ಚಾಲನೆ ಕೊಡಲಿದ್ದಾರೆ.

ಮಾರ್ಚ್ 20ರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಎಲ್ಲ ಫಲಾನುಭವಿಗಳನ್ನು ಒಂದೆಡೆ ಸೇರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಡಿಸಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

error: Content is protected !!