ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ 3 ತಿಂಗಳಿಂದ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವ ಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ 3 ತಿಂಗಳಿಂದ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೋವಿಡ್ 19 ನಿಯಂತ್ರಣಕ್ಕೆ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.