ಕೂಗು ನಿಮ್ಮದು ಧ್ವನಿ ನಮ್ಮದು

ಹಿಜಾಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

ಬೆಂಗಳೂರು: ಹಿಜಾಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್‌ ಆದೇಶವನ್ನು ಪಾಲಿಸಬೇಕೆಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಮತ್ತು ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

ರಾಜ್ಯದಲ್ಲಿ ಹಿಜಾಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಬೇಡಿಕೆ ಶುರುವಾಗಿತ್ತು. ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗಡೆ ಹಾಕಿದ್ರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಇದಾಗಿ 1 ತಿಂಗಳ ನಂತರ ಅಂದರೆ ಜನವರಿ 31ರಂದು ವಿದ್ಯಾರ್ಥಿನಿ ಅಲ್ಮಾಸ್ ಹೈಕೋರ್ಟ್‌ ಮೊರೆ ಹೋಗಿದ್ರು.

ನಂತರ ರಾಜ್ಯದಲ್ಲಿ ಧರ್ಮ ಸಂಘರ್ಷವೇ ಶುರುವಾಯ್ತು.
ಸರ್ಕಾರದ ಸಮವಸ್ತ್ರ ಆದೇಶ ಸಂಪೂರ್ಣ ಕಾನೂನು ಬಾಹಿರ ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಾಗಿದೆ. ಕಾಲೇಜಿಗೆ ದಾಖಲಾದಾಗಿನಿಂದ ಹಿಜಾಬ್ ಧರಿಸುತ್ತಿದ್ದಾರೆ. ಸಮವಸ್ತ್ರ ಬಣ್ಣದ ಹಿಜಾಬ್ ಧರಿಸ್ತಿದ್ದಾರೆ ಎಂದು ಧರ್ಮಗ್ರಂಥದಲ್ಲಿ ಇದೆ. ಶಾಸಕರಿಗೆ ಸಮವಸ್ತ್ರದ ಅಧಿಕಾರ ನೀಡಿದ್ದು ಸರಿಯಲ್ಲ. ಸರ್ಕಾರ ತನ್ನ ಜವಾಬ್ದಾರಿಯನ್ನು ಇತರರಿಗೆ ಹಸ್ತಾಂತರ ಮಾಡುವಂತಿಲ್ಲ. ಕಾಲೇಜು ಅಭಿವೃದ್ಧಿ ಮಂಡಳಿಗೆ ಶಾಸನಬದ್ಧ ಅಧಿಕಾರವಿಲ್ಲ. ಸರ್ಕಾರ ತನ್ನ ಅಧಿಕಾರವನ್ನು ಹಸ್ತಾಂತರಿಸಲು ಸಾಧ್ಯವಿಲ್ಲ. ಶಾಸಕರ ನೇತೃತ್ವದ ಅಭಿವೃದ್ಧಿ ಸಮಿತಿ ಸಮರ್ಥಿಸಿಕೊಂಡಿದ್ದಾರೆ.

ಸಿಡಿಸಿಯ ಇತರೆ ಸದಸ್ಯರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ಶಾಸಕರಿಗೆ ಕಾಲೇಜಿನ ಆಡಳಿತ ನೀಡುವುದೇ ಕಾನೂನುಬಾಹಿರ. ಸರ್ಕಾರದ ವಾದ ಏನಿತ್ತು? ಧಾರ್ಮಿಕ ಸಂಕೇತಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಬಳಕೆ ಮಾಡಬಾರದು ಎಂಬುದು ಸರ್ಕಾರದ ನಿಲುವು. ಆದ್ರೆ ಯಾವುದನ್ನು ಧಾರ್ಮಿಕ ಸಂಕೇತ ಎಂದು ಪರಿಗಣಿಸಬೇಕು. ಯಾವುದನ್ನು ಪರಿಗಣಿಸಬಾರದು ಎಂಬುದನ್ನು ಶಿಕ್ಷಣ ಸಂಸ್ಥೆಗಳಿಗೆ ಬಿಡಲಾಗಿದೆ. ಸಿಡಿಸಿ 1983ರ ಶಿಕ್ಷಣ ಕಾಯ್ದೆಯ ಅನುಗುಣವಾಗಿ ಸಮವಸ್ತ್ರ ಜಾರಿಗೆ ತಂದಿದೆ. ಸಮವಸ್ತ್ರ ಜಾರಿಗೆ ತರುವುದು ಸಮಾನತೆಗಾಗಿ ಸಿಡಿಸಿಗೆ ಸಮವಸ್ತ್ರ ಜಾರಿಗೆ ತರುವ ಅವಕಾಶ 2014ರಲ್ಲಿ ಒಪ್ಪಿಗೆ ಇತ್ತು. ಸಿಡಿಸಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಕಾಲೇಜಿನ ಬಗ್ಗೆ ತೀರ್ಮಾನಿಸುವ ಅಧಿಕಾರವಿದೆ. ಸಿಡಿಸಿಯಲ್ಲಿ ಒಬ್ಬರೇ ಅಧಿಕಾರ ಚಲಾಯಿಸುವುದಿಲ್ಲ. ಶಾಲೆಯ ಮಕ್ಕಳು, ಪೋಷಕರು, ಶಾಸಕರು, ಉಪನ್ಯಾಸಕರು ಎಲ್ಲರು ಇರುತ್ತಾರೆ.

error: Content is protected !!