ಕೂಗು ನಿಮ್ಮದು ಧ್ವನಿ ನಮ್ಮದು

ಹೈ ಮಧ್ಯಂತರ ಆದೇಶ ಡಿಪ್ಲೊಮಾ, ಡಿಗ್ರಿ ಕಾಲೇಜ್‍ಗೆ ಅನ್ವಯವಾಗಲ್ಲ!?: ಹಿಜಬ್ ಧರಿಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳ ಪಟ್ಟು

ಬೆಳಗಾವಿ: ನಗರದ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹನ್ನೆರಡು ಜನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿ, ಹೈಕೋರ್ಟ್ ಮಧ್ಯಂತರ ಆದೇಶ ಡಿಪ್ಲೊಮಾ, ಡಿಗ್ರಿ ಕಾಲೇಜ್‍ಗೆ ಅನ್ವಯವಾಗುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಕುಂದಾನಗರಿಯ ಸದಾಶಿವ ನಗರದಲ್ಲಿರುವ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದೆ.

ನಿನ್ನೆ ಹಿಜಾಬ್ ಗಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜ್ ಸಿಬ್ಬಂದಿ ಹೈಕೋರ್ಟ್ ಆದೇಶ ಪಾಲಿಸುವಂತೆ ಹೇಳಿದ್ರು. ಆದರೆ, ಇದಕ್ಕೆ ಕ್ಯಾರೆ ಎನ್ನದೆ ವಿದ್ಯಾರ್ಥಿಗಳು ಕೆಲ ಹೊತ್ತು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ಮಾಡಿದ್ರು. ಈ ಸಮಯದಲ್ಲಿ ಹೈಕೋರ್ಟ್ ಆದೇಶ ಡಿಪ್ಲೊಮಾ, ಡಿಗ್ರಿ ಕಾಲೇಜ್‍ಗೆ ಮಧ್ಯಂತರ ಆದೇಶ ಪಾಲನೆ ಅನ್ವಯ ಆಗುವುದಿಲ್ಲ ಎಂದು ಪ್ರತಿಯನ್ನು ಹಿಡಿದುಕೊಂಡು ಬಂದಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಪಾಟೀಲ್ ವಿದ್ಯಾರ್ಥಿಗಳನ್ನು ಕಾಲೇಜಿನ ಕೊಠಡಿಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಯರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ. ಆದ್ರೆ ನಾವು ಯಾವುದೇ ಕಾರಣಕ್ಕೂ ಹಿಜಾಬ್ ತೆಗೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ. ಸ್ಥಳದಲ್ಲಿ DCP ರವೀಂದ್ರ ಗಡಾದಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

error: Content is protected !!