ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನಾರ್ಭಟಕ್ಕೆ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ.
ಧಾರಾಕಾರ ಮಳೆಗೆ ಏಕಾಏಕಿ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕೈದ್ದು ಮಂದಿ ವಾಸಿಸುತ್ತಿದ್ದರು. ಅವರೆಲ್ಲರೂ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.