ಚಿತ್ರದುರ್ಗ: ಗೊಲ್ಲಹಳ್ಳಿ ಬಳಿ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ 4 ಜನ ಸಾವಿಗಿಡಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 150 (ಎ) ನಲ್ಲಿ ಈ ಭೀಕರ ಅಪಘಾತ ನಡೆದಿದೆ.
ಭೀಕರ ಅಪಘಾತದಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕಿಡಾದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮೃತರು ಬೆಂಗಳೂರು ಮೂಲದ ಪಾರ್ವತಮ್ಮ(45), ರಾಯಚೂರಿನ ಮಸ್ಕಿ ಮೂಲದ ರಮೇಶ್(40), ಮತ್ತಿಬ್ಬರ ಹೆಸರು ತಿಳಿಯಬೇಕಿದೆ. ಉಳಿದಂತೆ ಬಸ್ ನಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.