ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ.
ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಕಳೆದ 6 ತಿಂಗಳಿನಿಂದ ನನ್ನನ್ನು ಕಡೆಗಣಿಸಿದ್ದರು ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.