ಬೆಂಗಳೂರು: ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರ್ಪಡೆಯಾಗಿದ್ದೇನೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ನಾನು ಮಂತ್ರಿ, ಮುಖ್ಯಮಂತ್ರಿ ಆಗಿದ್ದೇನೆ, ನನಗೆ ಅಧಿಕಾರ ಬೇಕಿಲ್ಲ. ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಂಟ್ರೋಲ್ನಲ್ಲಿ ಇದೆ. ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡ್ತಿದ್ದಾರೆ.
ನಾನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಈ ರೀತಿ ಮಾಡಿದರು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.