ಕೂಗು ನಿಮ್ಮದು ಧ್ವನಿ ನಮ್ಮದು

ಮತ ಕ್ಷೇತ್ರಗಳಿಗೆ ಬಿಜೆಪಿ ಹಣ ಹಂಚಿರುವುದು ತುಂಬಾ ಅಸಹ್ಯಕರ: ಜಗದೀಶ್‌ ಶೆಟ್ಟರ್

ಹುಬ್ಬಳ್ಳಿ: ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್‌ ಶೆಟ್ಟರು, ಯಾವುದೂ ಸರಿಯಾಗಿ ಅನುಷ್ಠಾನಕ್ಕೆ ತರಲಿಲ್ಲ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿಲ್ಲಾ.

ಗಾರಿಕೆಗೆ ಎರಡು ಎಕರೆ ಜಮೀನು ಕೊಡಲು ಆಗಿಲ್ಲಾ. ವ್ಹೀಲ್ ಪವರ್ ಬೇಕು ಸಿಎಮ್‌ಗೆ. ಕೆಲಸ ಮಾಡಲು ಆಗದ ಸಿಎಂ ಯಾಕೇ ಇರಬೇಕು ಎಂದು ಆಡಳಿತ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಡೇ ಟುಡೆ ರಾಜ್ಯ ಸರ್ಕಾರದ ಆಡಳಿತವನ್ನು ಜನರು ನೋಡುತ್ತಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಯೋಜನೆಗಳು ಜನರಿಗೆ ತಲುಪಲಿಲ್ಲ.‌

ಇನ್ನುಳಿದಂತೆ ಯೆ ಮೀಸಲಾತಿ ಜನರಿಗೆ ತಲುಪಲಿಲ್ಲ ಮೀಸಲಾತಿ ಅನುಷ್ಠಾನ ಮಾಡಲ್ಲಾ ಅಂತಾ ಕೋರ್ಟ್‌ಗೆ ಹೇಳಿದ್ದಾರೆ. ಇಲ್ಲಿ ಜನರಿಗೆ ಮೋಸ ಮಾಡಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು
ಈ ನಿಟ್ಟಿನಲ್ಲಿ ಚುನಾವಣೆ ಪ್ರಚಾರದ ವೇಳೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ, ಕುಕ್ಕರ್ ಕೊಡುತ್ತಾರೆ. ಆದರೆ ಬಿಜೆಪಿ ಹೆಸರು ಹೇಳಿಕೊಳ್ಳುವ ವ್ಯಕ್ತಿಗಳು ನಮ್ಮ ಕ್ಷೇತ್ರದಲ್ಲಿ ಹತಾಶರಾಗಿ ಹಣ ಹಂಚಿದ್ದಾರೆ.‌ ಸ್ಲಮ್‌ಗಳಲ್ಲಿ ಜನರಿಗೆ ಐದು‌ನೂರು, ಸಾವಿರ ಹಣ ಕೊಟ್ಟಿದ್ದಾರೆ.

ಹಣದ ಬಲದ ಮೇಲೆ ಗೆಲ್ಲುವುದಾದರೆ ಬಹಳಷ್ಟು ಶ್ರೀಮಂತರೇ ಗೆಲ್ಲುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚುವುದು ಮಾಡಿದ್ದು ನನಗೆ ವೇದನೆಯಾಗಿದೆ ಎಂದಿದ್ದಾರೆ. ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ದ್ವಿಗುಣ ಬೆಂಬಲ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ.‌ನಾನು ಆರು ಎಲೆಕ್ಷನ್ ಮಾಡಿದ್ದೀನಿ, ಮತದಾರರಿಗೆ ದುಡ್ಡು ಹಂಚಿರಲಿಲ್ಲ ಎಂದು ಆಡಳಿತ ಪಕ್ಷದ ಬಗ್ಗೆ ಮಾತಾನಾಡಿದ್ದಾರೆ.

error: Content is protected !!