ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎಂದು ಇನ್ನೂ ಘೋಷೆಯಾಗಿಲ್ಲ. ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುನಿಸಿಕೊಂಡು, ದೆಹಲಿ ಪ್ರವಾಸ ಮಾಡಿ ಹೈಕಮಾಂಡ್ ಭೇಟಿಯಾಗಿದ್ದರು. ಈ ವೇಳೆ ಕೇಂದ್ರ ನಾಯಕರಿಗೆ ಎರಡು ದಿನದ ಗಡುವು ನೀಡಿ, ರಾಜ್ಯಕ್ಕೆ ಆಗಮಿಸಿದ್ದಾರೆ. ಎರಡು ದಿನ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು (ಏ.15) ಬೆಂಬಲಿಗರ ಸಭೆ ಬೆಳಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯ ನಿವಾಸದಲ್ಲಿ ಸಭೆ ನಡೆಯಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಶುರುವಾಗಿದೆ. ಪ್ರಮುಖ ಮೂರು ಪಕ್ಷಗಳು ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿವೆ. ರಾಜ್ಯ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಗಳು ನಡೆದಿವೆ. ಬಿಜೆಪಿಯ ಘಟಾನುಘಟಿ ನಾಯಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿನ್ನೆ (ಏ.14) ಎಂಎಲ್ಸಿ ಸ್ಥಾನಕ್ಕೆ ರಾಜಿನಾಮೆ ನೀಡಿ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇದರಿಂದ ರಾಜ್ಯ ಬಿಜೆಪಿಗೆ ಬಹಳ ದೊಡ್ಡ ಪೆಟ್ಟು ಬಿದ್ದಿದೆ ಎಂದು ರಾಜಕೀಯ ಪಡಸಾಲೆಯಿಂದ ಮಾತುಗಳು ಕೇಳಿ ಬರುತ್ತಿವೆ. ಇನ್ನು ಜೆಡಿಎಸ್ 2ನೇ ಪಟ್ಟಿಯಲ್ಲಿ ಹಾಸನ ಟಿಕೆಟ್ ಅನ್ನು ಜೆಡಿಎಸ್ ಸ್ಥಳಿಯ ನಾಯಕ ಸ್ವರೂಪ್ ಅವರಿಗೆ ಒಲಿಯುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹಿಡಿದ ಹಠವನ್ನು ಸಾಧಿಸಿದ್ದಾರೆ. ಇನ್ನು ಕಡೂರು ಕ್ಷೇತ್ರ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮರಳಿ ಜೆಡಿಎಸ್ ಸೇರಿ ಕಡೂರು ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಇಂದಿನ ಅಪ್ಡೇಟ್ಸ್