ಕೇಂದ್ರ ಸಚಿವನ ಭೇಟಿಗೆ ಕಾದು ಕಾದು ಕಂಗಾಲದ ಆಹಾರ ಸಚಿವ ಮುನಿಯಪ್ಪ, ಕಳೆದ ಮೂರು ದಿನಗಳಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿಗೆ ಅವಕಾಶ ನೀಡುತ್ತಿಲ್ಲ. ನಾಳೆ ಬೆಳಿಗ್ಗೆ 10 ಗಂಟೆಗೆ ಕೇಂದ್ರದ ರಾಜ್ಯ ಖಾತೆ ಸಚಿವರು ಭೇಟಿಗೆ ಕಾಲಾವಕಾಶ ನೀಡಿದ್ರು.
ಆದರೀಗ ನಾಳೆಯ ಭೇಟಿಗೂ ಅವಕಾಶ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ದೆಹಲಿಯಲ್ಲಿ ಅಸಮಾಧಾನ ಹೊರ ಹಾಕಿದ್ರು. ಅವರು ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾವು ಜನರಿಗೆ ನೀಡಿರೋ ಭರವಸೆಯಂತೆ ಅಕ್ಕಿ ನೀಡುತ್ತೇವೆ. ಅದಕ್ಕೆ ಬೇಕಾದ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೆವೆ. ಛತ್ತೀಸ್ಗಢ, ಪಂಜಾಬ್, ರಾಜ್ಯಗಳು ಅಕ್ಕಿ ನೀಡಲು ಮುಂದೆ ಬಂದಿವೆ ಎಂದರು.