ಪದೇಪದೆ ಮೋದಿ, ಅಮಿತ್ ಶಾ ಭೇಟಿಗೆ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಂಬಂಧಿಸಿ ಗತಿ ಇಲ್ಲದೇ ಇರುವವರು ಕಾಂಗ್ರೆಸ್ನಲ್ಲಿ ಪ್ರಚಾರಕ್ಕೆ ಬರುತ್ತಾರೆ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗ್ತಾರೆ. ಸಮಾವೇಶಗಳನ್ನು ಮಾಡಿಕೊಂಡು ಅವರಿಬ್ಬರು ಓಡಾಡುತ್ತಿದ್ದಾರೆ.
ಕಾಂಗ್ರೆಸ್ನಲ್ಲಿ ನಾಯಕರೇ ಇಲ್ಲ, ಹಾಗಾಗಿ ಯಾರೂ ಬರುತ್ತಿಲ್ಲ. ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ನಾಯಕರಿಲ್ಲದೆ ಸೊರಗುತ್ತಿದೆ. ರಾಹುಲ್, ಸೋನಿಯಾ, ಪ್ರಿಯಾಂಕಾ ಹೋದಕಡೆ ಕಾಂಗ್ರೆಸ್ ಸೋತಿದೆ. ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರ್ತಾರೆ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.