ಬೆಂಗಳೂರು: ಸಾರಿಗೆ ಇಲಾಖೆಯ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11.25ರಿಂದ ಶೇ. 21.50ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಜುಲೈ 27ರಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಅನ್ವಯ ನೌಕರರ ವೇತನಕ್ಕೆ ತುಟ್ಟಿ ಭತ್ಯೆ ಹೆಚ್ಚಳದ ಮೊತ್ತ ಸೇರ್ಪಡೆಯಾಗಲಿದೆ.
ಕರ್ನಾಟಕ ಸರ್ಕಾರವು ಉದ್ಯೋಗಿಗಳಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಿರುವ ವಿಷಯವನ್ನು ಜುಲೈ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಹಿರಂಗಪಡಿಸಿತ್ತು. ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ನೌಕರರ ಸಂಘ ತಿಳಿಸಿದೆ..