ಬೆಳಗಾವಿ: ಡಿ.ಕೆ.ಶಿವಕುಮಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರರೂ, ಬೆಳಗಾವಿ ಗ್ರಾಮೀಣ ಶಾಸಕರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಅಭಿನಂದಿಸಿ, ಶುಭಕೋರಿದರು.
ಹಗಲಿರುಳು ಪಕ್ಷದ ಏಳಿಗೆಗಾಗಿ ಶ್ರಮಿಸುತ್ತಿರುವ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ, ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪುನಋ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಸಂದೇಹವಿಲ್ಲ. ಅವರ ಕನಸು ನನಸಾಗಲಿ ಎಂದು ಪ್ರಾರ್ಥಿಸಿದರು.
ಅವರ ಪಕ್ಷನಿಷ್ಠೆ, ಪಕ್ಷದ ಸಂಘಟನೆ, ಕಾರ್ಯಕರ್ತರನ್ನು ಹುರಿದುಂಬಿಸಿ ಪಕ್ಷವನ್ನು ಬಲಪಡಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ ಎಂದು ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.