15 ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಶಾಸಕಿಯನ್ನು ಸನ್ಮಾನಿಸಿ, ಸಂಭ್ರಮಿಸಿದ ಗ್ರಾಮದ ಜೈನ್ ಸಮುದಾಯದ ಮುಖಂಡರು
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ಜೈನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ವಿಶೇಷ ಅನುದಾನ ಮಂಜೂರು ಮಾಡಿಸಿದ್ದು, ಆದೇಶಪತ್ರವನ್ನು ಶುಕ್ರವಾರ ಜೈನ ಸಮುದಾಯದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ಜೈನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ವಿಶೇಷ ಅನುದಾನ ಮಂಜೂರು ಮಾಡಿಸಿದ್ದು, ಆದೇಶಪತ್ರವನ್ನು ಶುಕ್ರವಾರ
ಜೈನ ಸಮುದಾಯದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.
ಗ್ರಾಮದ ಜೈನ ಸಮುದಾಯದ ಪ್ರತಿನಿಧಿಗಳು ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಗ್ರಾಮಕ್ಕೊಂದು ಜೈನ ಸಮುದಾಯ ಭವನ ಮಂಜೂರು ಮಾಡಿಸಬೇಕೆನ್ನುವ ಬೇಡಿಕೆ ಇಟ್ಟಿದ್ದರು. ಇದು ಅವರ ಕಳೆದ ಸುಮಾರು 15 ವರ್ಷಗಳ ಬೇಡಿಕೆಯಾಗಿತ್ತು. ಗ್ರಾಮಸ್ಥರ ಬೇಡಿಕೆಯಂತೆ ಪ್ರಸ್ತಾವನೆ ಸಿದ್ದಪಡಿಸಿದ ಲಕ್ಷ್ಮಿ ಹೆಬ್ಬಾಳಕರ್ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ 28 ಲಕ್ಷ ರೂ. ಮಂಜೂರು ಮಾಡಿಸಿ, ಆದೇಶ ಪತ್ರವನ್ನು ಹೊರಡಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ಶುಕ್ರವಾರ ಆದೇಶ ಪತ್ರದ ಪ್ರತಿಯನ್ನು ಸಮುದಾಯದ ಮುಖಂಡರಿಗೆ ಹಸ್ತಾಂತರಿಸಿದೆ. ಈ ಸಂದರ್ಭದಲ್ಲಿ ಅವರ ಮುಖದಲ್ಲಿನ ಮಂದಹಾಸವನ್ನು ನೋಡಿ ಖುಷಿಪಟ್ಟೆ. ಜೊತೆಗೆ ಅವರ ಆತ್ಮೀಯ ಸನ್ಮಾನವನ್ನು ಸ್ವೀಕರಿಸಿದೆ” ಎಂದು ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದರು