ಕೂಗು ನಿಮ್ಮದು ಧ್ವನಿ ನಮ್ಮದು

ಹಿರೇಬಾಗೇವಾಡಿ ಜನಪ್ರತಿನಿಧಿಗಳಿಂದ ಶಾಸಕರಿಗೆ ಅಹವಾಲು : ಸೂಕ್ತವಾಗಿ ಸ್ಪಂದಿಸಿದ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಹಿರೇ ಬಾಗೇವಾಡಿ ಗ್ರಾಮದ ಜನ ಪ್ರತಿನಿಧಿಗಳು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಗ್ರಾಮದ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು.

ಗ್ರಾಮದಲ್ಲಿ ನೀರಿನ ಸೌಲಭ್ಯ, ಪಂಚಾಯತ್ ಕಟ್ಟಡ ಮೊದಲಾದ ಅಭಿವೃದ್ಧಿ ಕೆಲಸಗಳ ಕುರಿತು ಅಹವಾಲು ಸಲ್ಲಿಸಿದರು. ಜನರ ಬೇಡಿಕೆಗಳಿಗೆ ಸ್ಪಂದಿಸಿದ ಲಕ್ಷ್ಮಿ ಹೆಬ್ಬಾಳಕರ್, ಈ ಕುರಿತು ಆದಷ್ಟು ಬೇಗ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!