ಕೂಗು ನಿಮ್ಮದು ಧ್ವನಿ ನಮ್ಮದು

ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋನೆವಾಡಿ ಗ್ರಾಮಕ್ಕೆ ಕುಡಿಯುವ ನೀರಿನ ಸರಬರಾಜು ಸಲುವಾಗಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 60 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಪರದಾಟವಿತ್ತು. ಆದರೆ ಈಗ ಜಲಜೀವನ್ ಮಿಷನ್ ಯೋಜನೆಯಿಂದಾಗಿ ಹಲವು ಹಳ್ಳಿಗಳ ಜನರಿಗೆ ನೆಮ್ಮದಿ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಕ್ಷೇತ್ರವನ್ನು ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ರಾಜು ಪಾಟೀಲ, ಅರುಣ ಪಾಟೀಲ, ಅನಿಲ, ವಸಂತ, ಲಕ್ಷ್ಮಣ ಕಿತ್ತವಾಡ್ಕರ್, ಗೌಡು ಪಾಟೀಲ, ಗೋಪಾಲ ಪಾಟೀಲ, ಸತೀಶ ಭಾತ್ಕಂಡೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!