ಕೂಗು ನಿಮ್ಮದು ಧ್ವನಿ ನಮ್ಮದು

ತಾರಕಕ್ಕೇರಿದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಜಿದ್ದಾಜಿದ್ದಿ

ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕಾಂಗ್ರೆಸ್ನ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಜೆಪಿಯ ರಮೇಶ್ ಜಾರಕಿಹೊಳಿ ಮಧ್ಯೆ ಕ್ರೆಡಿಟ್ ಫೈಟ್ ಆರಂಭವಾಗಿದೆ. ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಶಿಷ್ಟಾಚಾರದ ಪ್ರಕಾರ ನಾವು ಎಲ್ಲರನ್ನೂ ಆಹ್ವಾನ ಮಾಡುತ್ತೇವೆ. ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಮಧ್ಯೆ, ಮಾರ್ಚ್ 2ರಂದೇ ಕಾರ್ಯಕ್ರಮ ಮಾಡ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

error: Content is protected !!