ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಗ್ರಾಮದಲ್ಲಿ 30 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಗ್ರಾಮದ ಬಹುದಿನಗಳ ಬೇಡಿಕೆಯನ್ನು ಈಡೇರಿಸುತ್ತಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಜನರು, ಸ್ಥಳೀಯ ಜನ ಪ್ರತಿನಿಧಿಗಳು, ರಸ್ತೆ ಕಾಮಗಾರಿಗಳ ಗುತ್ತಿಗೆದಾರರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.