ಕೂಗು ನಿಮ್ಮದು ಧ್ವನಿ ನಮ್ಮದು

ಅಭಿವೃದ್ಧಿ ಕಾರ್ಯಗಳಿಗೆ ಮಹಿಳೆಯರ ಸಹಕಾರ ಅಗತ್ಯ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದ ಅರಿಶಿಣ ಕುಂಕುಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಗ್ರಾಮದ ಸಮಸ್ಯೆಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿದರು. 

ತಮ್ಮ ಶಾಸಕತ್ವದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪಿಸಿದ್ದು ಈಗಾಗಲೇ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳನ್ನು ಸಾಕಷ್ಟು ಪ್ರಮಾಣದಲ್ಲಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ವಿಶೇಷವಾಗಿ ಮಹಳೆಯರ ಸಹಕಾರ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಹೇಳಿದರು.

 

ಈವರೆಗೂ ಕ್ಷೇತ್ರದ  ಜನ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಿಗೆ ಉತ್ತಮ ಸಹಕಾರ ನೀಡಿದ್ದು ಅಪಾರ ಪ್ರಮಾಣದ ಪ್ರೀತಿ, ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ತಮಗೆ ಇನ್ನಷ್ಟು ಅಭಿವೃದ್ಧಿಗೆ ಪ್ರೇರಣೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಜನರು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.

error: Content is protected !!