ಕೂಗು ನಿಮ್ಮದು ಧ್ವನಿ ನಮ್ಮದು

ನಾಡಿನ ಜನತೆಗೆ ದೀಪಾವಳಿಯ ಶುಭಾಶಯ ತಿಳಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವ, ಗ್ರಾಮೀಣ ಕ್ಷೇತ್ರದ ಮನೆ ಮಗಳು ಎಂದೇ ಕರೆಸಿಕೊಳ್ಳೊ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ದೀಪಾವಳಿಯ ಈ ಬೆಳಕಿನ ಹಬ್ಬ ಸಮಸ್ತ ಜನತೆಯ ಬಾಳಿನಲ್ಲಿ ಬೆಳಕು, ಸುಖ, ಸಮೃದ್ದಿ, ಆರೋಗ್ಯದ ಜೊತೆ ಅಷ್ಟೈಶ್ವರ್ಯ ಕರುಣಿಸಲಿ ಎಂದು ಪ್ರಾರ್ಥಿಸುವ ಮೂಲಕ ಶುಭ ಕೋರಿದ್ದಾರೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನ ಅಭಿವೃದ್ಧಿ ಪಡಿಸುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ರಾಜ್ಯದಲ್ಲಿ ತಮ್ಮ ಸರಕಾರ ಅಧಿಕಾರದಲ್ಲಿಲ್ಲದ್ದರು ಸಾವಿರಾರು ಕೋಟಿ ಅನುದಾನವನ್ನ ತಮ್ಮ ಕ್ಷೇತ್ರಕ್ಕೆ ತಂದು‌ ಅಭಿವೃದ್ಧಿ ಮಾಡುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ.

error: Content is protected !!