ಬೆಂಗಳೂರು: ರಾಜಧಾನಿಯ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ವಿಪಕ್ಷನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಡಿಸಿಎಂ ಡಾ.ಪರಮೇಶ್ವರ್ ಜೊತೆಗೆ ಚರ್ಚೆ ನಡೆಸಿದ್ದಾರೆ.
ಪ್ರಣಾಳಿಕೆ ಬಿಡುಗಡೆ, ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.