ಕೋಲಾರ: ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಜಿಲ್ಲೆಯಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ. ಹೌದು ಜಿಲ್ಲೆಯ ಶ್ರೀನಿವಾಸಪುರ, ಮುಳಬಾಗಿಲು ಕೋಲಾರ ಸೇರಿದಂತೆ ರಾತ್ರಿಯಿಂದಲೂ ಮಳೆ ಸುರಿಯುತ್ತಿದ್ದು, ಮಳೆಯಿಂದ ಮಾವು ಕಟಾವಿಗೆ ತೊಂದರೆಯಾಗಿ, ಮಾವು ಬೆಳೆಗಾರರಿಗೆ ನಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಮಳೆಗಾಗಿ ಕಾದು ಕುಳಿತಿದ್ದ ರೈತರ ಮುಖದಲ್ಲಿ ಸಂತಸ ಮೂಡಿದ್ದು, ಹವಾಮಾನ ಇಲಾಖೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.