ಕೂಗು ನಿಮ್ಮದು ಧ್ವನಿ ನಮ್ಮದು

ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ಟ್ವಿಟ್ ಮುಂದಿನ ಎರಡು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಈಗ ಸಿಎಂ ಬದಲಾವಣೆಯ ಕೂಗು ಜೋರಾಗಿ ಸದ್ದು ಮಾಡುತ್ತಿದ್ದೆ. ಕೆಲವು ಶಾಸಕರು ಸಿಎಂ ಬದಲಾವಣೆ ಆಗಲೇ ಬೇಕು ಎಂದು ಪಟ್ಟು ಹಿಡಿದರೆ ಇನ್ನೂ ಕೆಲವು ಶಾಸಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಮುಂದುವರೆಯಲ್ಲಿ ಎಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಆದರೆ ಇದಕ್ಕೆಲ್ಲ ತೆರೆ ಎಳೆದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಬೀಡು ಬಿಟ್ಟು ಸಭೆಗಳನ್ನು ನಡೆಸಿ. ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಇಂತಿ ಶ್ರೀ ಹಾಡಿದ್ದಾರೆ. ಇನ್ನೂ ಸವದತ್ತಿ ಕ್ಷೇತ್ರದ ಶಾಸಕ ವಿಧಾನ ಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ಟ್ವಿಟರ್ ಮೂಲಕ ಸಂದೇಶ ರವಾನಿಸಿ. ರಾಜ್ಯದ ಜನರ ಹಿತ ಕಾಪಾಡುವುದರ ಜೊತೆಗೆ ಸುಭದ್ರ ಆಡಳಿತವನ್ನು ನಡೆಸುತ್ತಿರುವ ಸನ್ಮಾನ್ಯ ಯಡಿಯೂರಪ್ಪನವರು ಮುಂದಿನ ಎರಡು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿ.ಪ್ರಕೃತಿ ವಿಕೋಪ ಹಾಗೂ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೈಗೊಂಡ ಕ್ರಮಗಳು ಶ್ಲಾಘನೀಯವಾಗಿದ್ದು. ರಾಜ್ಯದಲ್ಲಿ ಅವರ ನೇತೃತ್ವದಲ್ಲಿ ಆಡಳಿತ ಮುಂದುವರೆಯಲಿ ಎಂದು ಆನಂದ ಮಾಮನಿ ಟ್ವಿಟ ಮಾಡಿದ್ದಾರೆ.

error: Content is protected !!