ಕೂಗು ನಿಮ್ಮದು ಧ್ವನಿ ನಮ್ಮದು

ಕರಡಿಗುದ್ದಿ ಗ್ರಾಮದಲ್ಲಿನ ಕೋವಿಡ್ ಲಸಿಕಾ ಕೇಂದ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೇಟಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದಲ್ಲಿನ ಕೋವಿಡ್ ಲಸಿಕಾ ಕೇಂದ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೇಟಿಯನ್ನು ನೀಡಿ ಅಲ್ಲಿನ ಜನರ ಆರೋಗ್ಯದ ಬಗ್ಗೆ ವಿಚಾರಿಸಿದರು.

ಕೊರೋನಾ ಸೋಂಕನ್ನು ಆದಷ್ಟು ಬೇಗ ಹೊಡೆದೊಡಿಸಲು ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ನ ಉಪಯೋಗವನ್ನು ನಾವೆಲ್ಲರೂ ಮರೆಯಬಾರದು. ಚಿಕ್ಕ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅನವಶ್ಯಕವಾಗಿ ಹೊರಗಡೆ ಬರದೇ ಕುಟುಂಬಸ್ಥರ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಜನರಲ್ಲಿ ಹೆಬ್ಬಾಳಕರ್ ವಿನಂತಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಸ್ಥಳೀಯ ಮುಖಂಡರು, ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

error: Content is protected !!