ಬೆಳಗಾವಿ: ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ತಿಗಡಿ ಗ್ರಾಮದಲ್ಲಿ ಪರಿಸರ ಸಂರಕ್ಷಣೆಗಾಗಿ ನಮ್ಮ ಪಣ ಎಂಬ ಅಭಿಯಾನದಡಿ ಸಸಿ ನೆಡುವ ಕಾರ್ಯಕ್ರಮವನ್ನು ತಿಗಡಿ ಗ್ರಾಮದಲ್ಲಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲೆ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ಅವರು ತಮ್ಮ ಸ್ವತಃ ಜಮೀನಲ್ಲಿ 50 ಎಕರೆ ಜಮನಿನಲ್ಲಿ 50000 ಸಾವಿರ ವಿವಿಧ ಬಗೆಯ ಸಸಿಗಳನ್ನು ನೆಡಲು ಅವಕಾಶ ಕಲ್ಪಿಸಿ ಮರಗಳ ರಕ್ಷಣೆಗೆ ಮುಂದಾಗಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಳಗಾವಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ಸದ್ಯಸರಾದ ಮಂಗಳಾ ಅಂಗಡಿ ಅವರು ಭಾಗವಹಿಸಿದ್ದರು. ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಭಾಗವಹಿಸಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಹಿರಿಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.